













ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಸುಳ್ಯದ ಕಾಂಗ್ರೆಸ್ ಮುಖಂಡ, ನ್ಯಾಯವಾದಿ ಎಂ.ವೆಂಕಪ್ಪ ಗೌಡರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸೆ.17 ರ ರಾತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಅಇದ ಅವರು, ನಮ್ಮ ಜಿಲ್ಲೆಯ ಸಿ ಮತ್ತು ಬಿ ಗ್ರೇಡ್ ದೇವಸ್ಥಾನಗಳಿಗೆ ಶ್ರೀಮಂತ ದೇವಸ್ಥಾನಗಳಿಂದ ಅನುದಾನ ನೀಡುವಂತೆ ಹಾಗೂ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ಜಾರಿಯಾಗದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು.
ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸಿ ಮತ್ತು ಬಿ ಗ್ರೇಡ್ ದೇವಸ್ಥಾನಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಸ್ಥಾನಗಳ ಅನುದಾನದಿಂದ ಅವುಗಳ ಅಭಿವೃದ್ಧಿ ಹಾಗೂ ನಿತ್ಯ ಪೂಜೆಗಳಿಗೆ ಅನುಕೂಲವಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡು ಮತ್ತು ಕರಾವಳಿ ಭಾಗದ ಜನಜೀವನದ ಮೇಲೆ ದುಷ್ಪರಿಣಾಮ ಬೀರಲಿದ್ದು, ಅದನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.








