ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಕೆಎಸ್ಆರ್ಟಿಸಿ ಬಸ್ಸು

0

ಪ್ರಯಾಣಿಕರು ಅಪಾಯದಿಂದ ಪಾರು

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿ ಬಳಿ ಚರಂಡಿಗೆ ಜಾರಿದ ಘಟನೆ ಸೆಪ್ಟೆಂಬರ್ 19ರಂದು ಸಂಜೆ ನಡೆದಿದೆ.

ಘಟನೆಯಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.