













ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ 6ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಮತ್ತು ಸಾರ್ವಜನಿಕ ಮೊಸರು ಕುಡಿಕೆ ಉತ್ಸವವು ನಾಳೆ (ಸೆ.20)ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಆ ಬಳಿಕ ಅಂಗನವಾಡಿ ಮಕ್ಕಳಿಗೆ ಸ್ಪರ್ಧೆ, ಸಾರ್ವಜನಿಕರಿಗೆ ಎಣ್ಣೆ ಕಂಬ ಸ್ಪರ್ಧೆ ಸೇರಿದಂತೆ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿವಿಧ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಪುಟಾಣಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ.






