ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮ















ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡುವ ಮಹತ್ವದ ಘೋಷಣೆಯಾದ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೆ. 19ರಂದು ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ರವರು ಮಾತನಾಡಿ ರಾಜ್ಯ ಸರ್ಕಾರದ ಈ ಐತಿಹಾಸಿಕ ತೀರ್ಮಾನವನ್ನು ಸ್ವಾಗತಿಸಿ ನಾವು ಈ ಸಂಭ್ರಮಾಚರಣೆಯನ್ನು ಮಾಡುತ್ತಿದ್ದು ಇದು ನಮ್ಮ ತುಳು ನಾಡಿಗೆ ಮತ್ತು ತುಳು ಪರಂಪರೆಗೆ ಸಂದ ಜಯವಾಗಿದೆ ಎಂದು ಹೇಳಿದರು. ಅಲ್ಲದೆ ನಮ್ಮ ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳ ಪಟ್ಟಿಯನ್ನು ಸಂಬಂಧಪಟ್ಟ ಸಚಿವರುಗಳಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯ ಕಾರ್ಯರೂಪಕ್ಕಾಗಿ ಪ್ರಯತ್ನಿಸುವ ಕೆಲಸ ಕಾರ್ಯಗಳನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಲ್ಲಾ ನಾಯಕರ ನೇತೃತ್ವದಲ್ಲಿ ಮಾಡಲಿದ್ದೇವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರಾದ ನಂದರಾಜ್ ಸಂಕೇಶ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಂ ಮುಸ್ತಫಾ,ಕರ್ನಾಟಕ ರಾಜ್ಯ ಅರೆಬಾಷೆ ಅಕಾಡೆಮಿ ಸದಸ್ಯರಾದ ಡಾ. ಜ್ಞಾನೇಶ್ ರವರು ಮಾತನಾಡಿ ರಾಜ್ಯ ಸರ್ಕಾರದ ಈ ತೀರ್ಮಾನವನ್ನು ಪ್ರಶಂಶಿಸಿ ಸಂತಷ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ್ ಕಲ್ಮಡ್ಕ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ವಂದಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ ಕೆ ಹಮೀದ್, ಹಾಗೂ ಪಕ್ಷದ ಮುಖಂಡರುಗಳಾದ ದೀರಾ ಕ್ರಾಸ್ತಾ, ರಾಜು ಪಂಡಿತ್, ಎಸ್ ಕೆ ಹನಿಫ್, ಜೂಲಿಯಾನ ಕ್ರಾಸ್ತಾ, ಭೋಜಪ್ಪ ನಾಯಕ್, ಜುಬೇರ್ ಅರಂತೋಡು, ಸೇರಿದಂತೆ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.







