ಪಶುವೈದ್ಯರನ್ನು ಎಸ್.ಐ.ಆರ್ ಪ್ರಕ್ರಿಯೆಯಿಂದ ಕೈಬಿಡಬೇಕು, ಕಳಂಜ ಪಶು ಆಸ್ಪತ್ರೆಯ ಕಟ್ಟಡದ ದುರಸ್ತಿಗೆ ಎನ್. ವಿಶ್ವನಾಥ ರೈಯವರಿಂದ ಮನವಿ

0

ರಾಜ್ಯ ಚುನಾವಣಾ ಆಯೋಗದ ಮೂಲಕ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣಾ ಕಾರ್ಯಯಿಂದ ಸುಳ್ಯ ತಾಲೂಕಿನ ಪಶು ವೈದ್ಯರಿಗೆ ವಿನಾಯಿತಿ ನೀಡಬೇಕು ಮತ್ತು ಕಳಂಜ ಪಶುವೈದ್ಯಕೀಯ ಆಸ್ಪತ್ರೆಯ ಕಟ್ಟಡವನ್ನು ದುರಸ್ತಿಪಡಿಸುವಂತೆ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ವಿಶ್ವನಾಥ ರೈ‌ ಕಳಂಜ ಸರಕಾರಕ್ಕೆ ಮನವಿ ನೀಡಿದ್ದಾರೆ.
ಸುಳ್ಯ ತಾಲೂಕಿನಲ್ಲಿ ಸುಮಾರು 42 ಪಶುವೈದ್ಯರ ಅಗತ್ಯತೆ ಇದ್ದರೂ ಕೇವಲ 3-4 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಎಸ್.ಐ.ಆರ್ ಪ್ರಕ್ರಿಯೆಗೆ ನಿಯೋಜನೆ ಮಾಡಲಾಗಿದ್ದು, ರೈತರಿಗೆ ತುರ್ತು ಸಂದರ್ಭದಲ್ಲಿ ಪಶುವೈದ್ಯರು ಅಲಭ್ಯರಾಗುವುದರಿಂದ ಪಶುವೈದ್ಯರನ್ನು ಮತದಾರರ ಪರಿಷ್ಕರಣೆ ಪ್ರಕ್ರಿಯೆಯಿಂದ ವಿನಾಯಿತಿ ನೀಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಅದೇ ರೀತಿ ಕಳಂಜದಲ್ಲಿರುವ ಪಶುವೈದ್ಯದ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದ ಕೆಲವು ಕಡೆ ಮೇಲ್ಛಾವಣಿ ಕುಸಿದು ಬಿದ್ದಿದೆ. ಸಂಬಂಧಿಸಿದ ಇಲಾಖೆಯ ಮೂಲಕ ಕಟ್ಟಡವನ್ನು ದುರಸ್ತಿಪಡಿಸಬೇಕೆಂದು ಮನವಿಯಲ್ಲಿ ತಿಳಿಸಿರುವುದಾಗಿ ವಿಶ್ವನಾಥ ರೈಯವರು ಪತ್ರಿಕೆಗೆ ತಿಳಿಸಿರುತ್ತಾರೆ. ಸೆ. 18ರಂದು ಮಂಗಳೂರಿನಲ್ಲಿ ನಡೆದ ಸಚಿವ‌ ಸಂಪುಟ ಸಭೆಯಲ್ಲಿ ಮುಖ್ಯ ಮಂತ್ರಿಯವರಿಗೆ ಮನವಿ ನೀಡಿರುವುದಾಗಿ ತಿಳಿಸಿದ್ದಾರೆ.