













ರಾಜ್ಯದ ಇತಿಹಾಸದಲ್ಲೇ ಪ್ರಥಮವಾಗಿ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮೆಲ್ಲರ ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನ ಮಾನ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ನಮ್ಮ ದಶಕಗಳ ಬೇಡಿಕೆಯನ್ನು ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿದ್ದಾರೆ. ದ. ಕ.ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹಲವು ಯೋಜನೆಗಳನ್ನು ನೀಡಿದ್ದಾರೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಾದ ಯು .ಟಿ. ಖಾದರ್ , ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಪ್ರಯತ್ನವೂ ಇದರ ಹಿಂದೆ ಇದೆ. ಇವರೆಲ್ಲರ ಕಾಳಜಿಗೆ ನಾವು ಕೃತಜ್ಞತೆ ಅರ್ಪಿಸಬೇಕು.
ಡಾ. ದೇವಿಪ್ರಸಾದ್ ಕಾನತ್ತೂರ್
ಅಧ್ಯಕ್ಷರು ,
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ







