













ಸ್ಕ್ಯಾಡ್ಸ್ ಮಂಗಳೂರು (SKADS) ಸಂಸ್ಥೆ ವತಿಯಿಂದ ಸಂಸ್ಥೆಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಗಳಿಗೆ ಕೊಡ ಮಾಡುವ ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿಯವರು ಪ್ರಶಸ್ತಿ ಸ್ವೀಕರಿಸಿದರು. ಸ್ಕ್ಯಾಡ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ ಗೌರವಿಸಿದರು.







