ಜಾಲ್ಸೂರು ಗ್ರಾಮ ಮಟ್ಟದ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಸೆ. 22ರಂದು ನಡೆಯಿತು.















ಪಂಚಾಯತ್ ಆಡಳಿತ ಅಧಿಕಾರಿ ಶ್ರೀಮತಿ ವೀಣಾ ಎಂ.ಟಿ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಲೀಲಾವತಿಯವರು ” ನಾವು ತೆಗೆದುಕೊಳ್ಳುವ ಪೌಷ್ಟಿಕ ಆಹಾರದ ಬಗ್ಗೆ ತಿಳಿದುಕೊಳ್ಳುವ ಕ್ರಮಗಳ ಬಗ್ಗೆ” ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಪೌಷ್ಟಿಕ ಆಹಾರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರಚನ ಗರ್ಭಿಣಿಯರಿಗೆ ಆರೋಗ್ಯ ತಪಾಸಣೆಯ ಬಗ್ಗೆ ಮಗುವಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪ್ರಾಥಮಿಕ ಕಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಜಲಜಾಕ್ಷಿ ಪಿ.ಕೆ., ಶ್ರೀಮತಿ ಜಯಶ್ರೀ, ಸಮುದಾಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ತಿಲಕ ಉಪಸ್ಥಿತರಿದ್ದರು.

ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು ಹಾಗೂ ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಸಲಾಯಿತು. ಸುಮಾರು 15 ಜನ ತಾಯಂದಿರು ಪೌಷ್ಟಿಕ ಆಹಾರವನ್ನು ತಯಾರಿಸಿ ತಂದಿದ್ದರು. ಇದಕ್ಕೆ ಪ್ರಥಮ ದ್ವಿತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಅನ್ನಪ್ರಶನ ಮಾಡಿಸಿದ ಮಕ್ಕಳಿಗೂ ಬಹುಮಾನ ನೀಡಲಾಯಿತು.
ಶರಶ್ಚoದ್ರ ಐ. ಕೆ. ಕದಿಕಡ್ಕ, ಸಂದೀಪ್ ಕುಮಾರ್ ಕದಿಕಡ್ಕ, ಗ್ರಾಮ ಪಂಚಾಯತ್ ಸದಸ್ಯರು ಬಹುಮಾನವನ್ನು ಪ್ರಾಯೋಜಕರಾಗಿ ನೀಡಿದ್ದರು.
ಸೋಣoಗೇರಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ ಕೆ., ಮರಸಂಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕುಮಾರಿ ಆರ್., ಅಡ್ಕಾರು ಅಂಗನವಾಡಿ ಕಾರ್ಯಕರ್ತೆ ತುಳಸಿ ಎಂ. ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಸರಸ್ವತಿ ಎಂ, ಶ್ರೀಮತಿ ಶಾರದಾ, ಶ್ರೀಮತಿ ಕುಸುಮ, ಶ್ರೀಮತಿ ಭಾರತಿ, ಶ್ರೀಮತಿ ಅನಿತಾ, ಶ್ರೀಮತಿ ಲೀಲಾವತಿ ಕೆ, ಮತ್ತು ಶ್ರೀಮತಿ ಜಗನ್ಮೋಹಿನಿ ಸಹಕರಿಸಿದರು.
ಮಕ್ಕಳ ತಾಯಂದಿರು ಮಕ್ಕಳು ಪೋಷಕರು ಭಾಗವಹಿಸಿದ್ದರು. ಕದಿಕಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಪ್ರಾರ್ಥಿಸಿ, ಬೊಳುಬೈಲು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬೇಬಿಕುಮಾರಿ ಸ್ವಾಗತಿಸಿದರು. ಕುಕ್ಕoದೂರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಜಾತ ವಂದಿಸಿದರು. ಕೊನಡ್ಕಪದವು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ಕಾರ್ಯಕ್ರಮ ನಿರೂಪಿಸಿದರು.







