













ಕಾರು ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆದು, ಬಂಟ್ವಾಳದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಬಿ. ರಮಾನಾಥ ರೈ ಅವರನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಪ್ರಮುಖರಾದ ವಸಂತ ಗೌಡ ಪೆಲ್ತಡ್ಕ ಹಾಗೂ ಜ್ಞಾನಶೀಲನ್ (ರಾಜು) ನೆಲ್ಲಿಕುಮೇರಿ ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ರಮಾನಾಥ ರೈ ಅವರ ಆರೋಗ್ಯದ ಕುರಿತು ವಿಚಾರಿಸಿದ ಅವರು, ಶೀಘ್ರವಾಗಿ ಸಂಪೂರ್ಣ ಗುಣಮುಖರಾಗುವಂತೆ ಹಾರೈಸಿದರು.







