ಜನರ ಬಹುವರ್ಷಗಳ ಬೇಡಿಕೆಗೆ ಶಾಸಕ ಎ.ಎಸ್. ಪೊನ್ನಣ್ಣ ಸ್ಪಂದನೆ

0

ಚೆಂಬು–ತಾವೂರು ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

ಚೆಂಬು ಮತ್ತು ತಾವೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ವಿರಾಜಪೇಟೆ ಶಾಸಕ ಶ್ರೀ ಎ.ಎಸ್. ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ಅಂದಾಜು ₹40 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಸ್ಥಳೀಯ ಜನರ ಬಹುವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಶಾಸಕರಾದ ಶ್ರೀ ಎ.ಎಸ್. ಪೊನ್ನಣ್ಣ ಅವರ ಸೂಚನೆಯ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಚೆಂಬು ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಂ. ಇಸ್ಮಾಯಿಲ್, ಕೊಡಗು ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಝ ಕೋಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಮುಖಂಡರು ಗುದ್ದಲಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ನಡುಬೆಟ್ಟು ಚೆನ್ನಪ್ಪ, ಯುವ ಕಾಂಗ್ರೆಸ್ ಮುಖಂಡ ರಾಶಿಧ್ ಚೆಟ್ಟಿಮಾನಿ, ಮುಖಂಡರಾದ ರಶೀದ್ ಬಾಲೆಂಬಿ, ಚೆಂಬು ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ಪನೇಡ್ಕ, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂವಣ್ಣ ಕಲ್ಯಾಳ, ಮುಖಂಡರಾದ ಬಾಲೆಂಬಿ ಸೋಮಣ್ಣ, ಪದ್ಮನಾಭ ಮಂಗಳಪಾರೆ, ನವೀನ ರಾಮಕಜೆ, ದೇವಂಗೋಡಿ ಅಚ್ಚಪ್ಪ, ರಾಮಮೂರ್ತಿ ಉಂಬಳೆ, ಕುಮಾರ ಕಟ್ಟಪಳ್ಳಿ, ಕವನ ಅತ್ಯಾಡಿ, ಗಿನಿಲ್ ಕಾಳಪ್ಪಕಜೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
.