ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ಲಿತೇಶ್ ಪೀಚೆ ರಾಜ್ಯಮಟ್ಟಕ್ಕೆ ಆಯ್ಕೆ

0

ಸೆ. 23: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ತಂಡದ ಸದಸ್ಯ ಲಿತೇಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಇವರು ಪೆರಾಜೆ ಗ್ರಾಮದ ದಿ| ಉತ್ತರಕುಮಾರ ಪೀಚೆ ಮತ್ತು ಸುಶೀಲ ದಂಪತಿಯ ಪುತ್ರರಾಗಿದ್ದು ಪ್ರಸ್ತುತ SDM ಉಜಿರೆ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ..
ಇವರಿಗೆ ದೈಹಿಕ ನಿರ್ದೇಶಕರಾದ ಸಂದೇಶ್ ಬಿ ಪೂಂಜಾ ಇವರು ತರಬೇತಿ ನೀಡುತ್ತಿದ್ದಾರೆ.