ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎನ್‌ಎಸ್‌ಎಸ್ ದಿನಾಚರಣೆ

0

ಸುಳ್ಯದಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆವಿಜಿ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಯೋಜನಾಧಿಕಾರಿ ನಯನಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಎನ್‌ಎಸ್‌ಎಸ್‌ನ ಉದ್ದೇಶ, ಸಾಮಾಜಿಕ ಸೇವೆಯ ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವಲ್ಲಿ ಎನ್‌ಎಸ್‌ಎಸ್‌ನ ಪಾತ್ರದ ಕುರಿತು ಮಾತನಾಡಿದರು.


ಕೆವಿಜಿ ಮೆಡಿಕಲ್ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ವಿದ್ಯಾ ಕೆ ಹಾಗೂ ಕೆವಿಜಿ ನರ್ಸಿಂಗ್ ಇನ್ಸ್ಟಿಟ್ಯೂಟ್ ನ ಎನ್‌ಎಸ್‌ಎಸ್ ಯೋಜನಾಧಿಕಾರಿ ಜಿಮ್ಸಿ ಜಾನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಎನ್‌ಎಸ್‌ಎಸ್ ಸ್ವಯಂಸೇವಕರು ,ವಿದ್ಯಾರ್ಥಿಳು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.