













ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತು ಗೌರವಧನ ವಿತರಣೆಯ ವಿಳಂಬ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಸೆ. 28ಕ್ಕೆ ದ.ಕ ಜಿಲ್ಲೆಯಲ್ಲಿ ಅಂಗನವಾಡಿ ಬಂದ್ ಗೆ ಕರೆ ನೀಡಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸುಳ್ಯ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಲತಾ ಅಂಬೆಕಲ್ಲುರವರು, ನಮ್ಮ ವಿವಿಧ ಬೇಡಿಕೆಗಳಿಗೆ ಮನವಿ ಕೊಟ್ಟರೂ ಸರಕಾರ ಸ್ಪಂದಿಸುತ್ತಿಲ್ಲ. ಅಲ್ಲದೆ ಕಳೆದ ಎರಡು ತಿಂಗಳಿನಿಂದ ಗೌರವಧನ ನಮಗೆ ಕೊಟ್ಟಿಲ್ಲ. ಸುಮಾರು ಒಂದು ವರ್ಷದಿಂದ ಗ್ಯಾಸ್ ಖರ್ಚಿನ ಹಣವು ನೀಡುತ್ತಿಲ್ಲ. ಹೀಗಾಗಿ ಸೆ. 28 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ ಬಂದ್ ಮಾಡಿ ಪ್ರತಿಭಟಿಸಲಿದ್ದೇವೆ ಎಂದು ಹೇಳಿದ್ದಾರೆ.






