













ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಗೌರವಾಧ್ಯಕ್ಷರನ್ನಾಗಿ ಪತಂಜಲಿ ಭಾರದ್ವಾಜ್ ರವರನ್ನು ಸೆ.27 ರಂದು ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಯವರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಪದ್ಮಶ್ರೀ ಪುರಸ್ಕೃತ
ಡಾ.ಗಿರೀಶ್ ಭಾರದ್ವಾಜ್ ರವರುಗೌರವಾಧ್ಯಕ್ಷರಾಗಿದ್ದು ತೆರವಾದ ಸ್ಥಾನಕ್ಕೆ ಅವರ ಪುತ್ರ ಪತಂಜಲಿ ಭಾರದ್ವಾಜ್ ರವರನ್ನು ಆಯ್ಕೆ ಮಾಡುವುದಾಗಿ ನಿರ್ಧರಿಸಲಾಗಿದ್ದು , ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಒಪ್ಪಿಗೆಯಂತೆ ಆಯ್ಕೆ ಮಾಡಲಾಯಿತು.







