













ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕು ಜಡ್ಕ ಇದರ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಪುಳಿಮಾರಡ್ಕ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು ಅವರಿಗೆ 71 ವರ್ಷ ವಯಸ್ಸಾಗಿತ್ತು.
ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು,ಆಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಅವರು ಕಳೆದ ಅವಧಿಯಲ್ಲಿ ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಅಭಿವೃದ್ಧಿಗೆ ದುಡಿದಿದ್ದರು.
ಮೃತರು ಪುತ್ರ ಪುನಿತ್, ಪುತ್ರಿ ಹರ್ಷಿತ, ಸಹೋದರರು, ಸಹೋದರಿಯರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.







