ಸತತ ಮೂರನೇ ಬಾರಿಗೆ ಶೇ.100 ಫಲಿತಾಂಶ, ಕುಮಾರಸ್ವಾಮಿ ಪಿಯು ಕಾಲೇಜಿಗೆ ಗೌರವ

0

2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ ಕುಮಾರಸ್ವಾಮಿ ಪಿಯು ಕಾಲೇಜನ್ನು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ–2026 ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಮಂಗಳೂರು ಹಾಗೂ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು.
ಕುಮಾರಸ್ವಾಮಿ ಪಿಯು ಕಾಲೇಜು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಸತತ ಮೂರನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿರುವುದು ವಿಶೇಷ ಸಾಧನೆಯಾಗಿದೆ.