













ಅಜ್ಜಾವರ ಗ್ರಾಮದ ದೊಡ್ಡೇರಿ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.
ನೂತನ ಅಧ್ಯಕ್ಷರಾಗಿ ಸೋಮನಾಥ, ಪ್ರಧಾನ ಕಾರ್ಯದರ್ಶಿಯಾಗಿ ಜೀವನ್ ಕುಮಾರ್, ಕೋಶಾಧಿಕಾರಿಯಾಗಿ ತಿಮ್ಮಪ್ಪ ಇವರನ್ನು ಆಯ್ಕೆ ಮಾಡಲಾಯಿತು. ದೊಡ್ಡೇರಿ ಮಹಮ್ಮಾಯಿ ಮಹಿಳಾ ಸಮಿತಿಗೆ ನೂತನ ಅಧ್ಯಕ್ಷರಾಗಿ ವಸಂತಿ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಯಾಗಿ ಗೀತಾ ಪುರುಷೋತ್ತಮ, ಕೋಶಾಧಿಕಾರಿ ಹೇಮಲತಾ ಇವರನ್ನು ಆಯ್ಕೆ ಮಾಡಲಾಯಿತು.







