ಅ.10ರಿಂದ 20: ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ – ಆಮಂತ್ರಣ ಪತ್ರ ಬಿಡುಗಡೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ. 10ರಿಂದ ಅ. 20ರ ತನಕ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಸೆ. 29ರಂದು ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಕೋಶಾಧಿಕಾರಿ ಆನಂದ ಗೌಡ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಂಜಿಗಾರು ಪೊಸವಳಿಗೆ, ಕಾರ್ಯದರ್ಶಿ ಈಶ್ವರ ವಾರಣಾಶಿ, ಕೋಶಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸೇರಿದಂತೆ ಎರಡೂ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಮಾತೃಮಂಡಳಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಆನಂದ ಗೌಡ ಪಡ್ಪು ಮತ್ತು ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.