













ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ತುರ್ತು ಪರಿಸ್ಥಿತಿಯಲ್ಲಿ ಗಾಬರಿಯಾಗದೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ರೋಶನ್ ಫೆರ್ನಾಂಡೀಸ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಕಾರ್ಯದರ್ಶಿ ಪ್ರಶಾಂತ್ ಟಿ ಎಂ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ.ಎಂ ಸ್ವಾಗತಿಸಿದರು. ಪೂರ್ವಾಧ್ಯಕ್ಷ ವಿನಯ್ ಕುಮಾರ್ ಕೆ ವಂದಿಸಿದರು.







