ಸುಳ್ಯ ಡಿಗ್ರಿ ಕಾಲೇಜಿನಲ್ಲಿ ಎನ್.ಎಸ್.ಎಸ್. ದಿನಾಚರಣೆ

0

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆ.24ರಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊಫೆಸರ್ ಸತೀಶ್ ಎನ್ ಪಿ ಇವರು ವಹಿಸಿಕೊಂಡಿದ್ದರು . ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಶಿವಪ್ರಸಾದ್ ಕೆ ಆರ್ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು . ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ.ಪ್ರೀತಿ.ಕೆ ರಾವ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಪ್ರೊಫೆಸರ್ ಕಿಶೋರ್ ಕುಮಾರ್ .ಬಿ.ಡಿ ಹಾಗೂ ಡಾ.ಮೋನಿಷಾ. ಕೆ ,ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದ, ರಾಷ್ಟ್ರೀಯ ಸೇವಾ ಯೋಜನೆಯ ನಾಯಕರಾದ ಭಾಗ್ಯಶ್ರೀ . ಕೆ.ಡಿ, ರಿತೇಶ್ , ವಕ್ಷಿತಾ. ಎಚ್. ಹಾಗೂ ರಜತ್ ಉಪಸ್ಥಿತರಿದ್ದರು.
ಸ್ವಯಂಸೇವಕಿ ಸ್ಪೂರ್ತಿ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಯಂ ಸೇವಕಿ ಪ್ರಿಯದರ್ಶಿನಿ ಸರ್ವರನ್ನೂ ಸ್ವಾಗತಿಸಿ ಪ್ರತೀಕ್ಷಾ ವಂದಿಸಿದರು. ಕಾಲೇಜಿನ ಎಲ್ಲಾ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.