














ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಅಕ್ಷಯ ಯುವಕ ಮಂಡಲ ನೆಟ್ಟಾರು ಸಹಭಾಗಿತ್ವದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ. ಪಿ. ಆರ್ ತರಬೇತಿ ಶಿಬಿರವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಸೆ. 29 ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಉದ್ಘಾಟಿಸಿದರು.ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬೆಳ್ಳಾರೆ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಕ್ಷಯ ಯುವಕ ಮಂಡಲ ನೆಟ್ಟಾರು ಅಧ್ಯಕ್ಷರಾದ ಭಾಸ್ಕರ ನೆಟ್ಟಾರು ವೇದಿಕೆಯಲ್ಲಿದ್ದರು.ಸಾರ್ವಜನಿಕರಿಗೆ ಉಚಿತ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಿತು.ಸಿ.ಪಿ.ಆರ್ ಕರಪತ್ರ ಬಿಡುಗಡೆ ಮತ್ತು ಹಂಚಿಕೆ ಹಾಗೂ ಗರ್ಭಿಣಿಯರಿಗೆ ಉಚಿತ ಕಿಟ್ ವಿತರಣೆ ನಡೆಯಿತು.ಮಂಗಳೂರು ಕಸ್ತೂರಿ ಬಾ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯ ರೋ ಡಾ-ರಂಜನ್ ಪ್ರಥಮ ಚಿಕಿತ್ಸೆ(ಸಿ.ಪಿ.ಆರ್) ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ಳಾರೆ ವಲಯದ ಆಶಾಕಾರ್ಯಕರ್ತರು,ಅಕ್ಷಯ ಯುವಕ ಮಂಡಲದ ಸದಸ್ಯರು,ರೋಟರಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ರೋಟರಿ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬೆಳ್ಳಾರೆ
ಸ್ವಾಗತಿಸಿದರು.ಕಾರ್ಯದರ್ಶಿ ಪ್ರಶಾಂತ್ ತಂಟೆಪ್ಪಾಡಿ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.








