ಅ.8: ಸುಳ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನಾ ಸಭೆ

0

ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಅ.8 ರಂದು ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯು ನಡೆಯಲಿದೆ. ರಾಜ್ಯ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕರಾದ ಕಿಶೋರ್ ಶಿರಾಡಿ ಯವರು ಭಾಗವಹಿಸಲಿದ್ದು ಸರಕಾರದ ಮುಂದೆ ಹಲವಾರು ಬೇಡಿಕೆಯನ್ನು ಮಂಡಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.