













ದ.ಕ. ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ
- ಮೋಜಣಿದಾರರ ಸಂಘ, ಮಂಗಳೂರು ಇವರ ವತಿಯಿಂದ
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಸುಳ್ಯ ತಾಲೂಕು ಮಟ್ಟದ
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ರಸಪ್ರಶ್ನೆ ಸ್ಪರ್ಧೆ ಅ.5ರಂದು
ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಉದ್ಘಾಟನೆಯನ್ನು ಸುಬ್ರಹ್ಮಣ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ನೆರವೇರಿಸಿದರು.
ದ.ಕ. ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘಾ ಅಧ್ಯಕ್ಷ ಅಧ್ಯಕ್ಷತೆ ಯನ್ನು ಯೋಗೀಶ್ ಜಿ.ಸಿ. ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಳ್ಯ ರೇಂಜರ್ ನಿರಂಜನ ಶೆಟ್ಟಿ, ಸುಳ್ಯ ರೋಟರಿಕ್ಲಬ್ ಅಧ್ಯಕ್ಷೆ ರೊ. ಲತಾ ಮಧುಸೂದನ್,
ಸುಳ್ಯ ರೋಟರಿ ವಿದ್ಯಾಸಂಸ್ಥೆಯ ಸಂಚಾಲಕ ರೊ. ಪ್ರಭಾಕರ್ ನಾಯರ್,
ಸುಳ್ಯ ರೋಟರಿ ಸಿಟಿ ಕ್ಲಬ್ ಅಧ್ಯಕ್ಷ ರೊ. ರಾಗೇಶ್ ರಾಘವ್, ರೋಟರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ
ಶ್ರೀಮತಿ ಜೋತ್ಸ್ನಾ ಕೆ., ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಅಪೂರ್ವ ಆಚ್ರಪ್ಪಾಡಿ
ವೇದಿಕೆಯಲ್ಲಿದ್ದರು.

ತಾಲೂಕಿನ ವಿವಿಧ ಶಾಲೆಗಳಿಂದ ಬಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ವನ್ಯಜೀವಿ ವಿಷಯಕ್ಕೆ ಸಂಬಂಧಿಸಿ ರಸಪ್ರಶ್ನೆ ಸ್ಪರ್ಧೆ ನಡೆಸಲಾಗಿದೆ.
ಕಾರ್ಯಕ್ರಮದ ನಿರೂಪಣೆಯನ್ನು ಉಪ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸೌಮ್ಯ ರವರು ನಿರ್ವಹಿಸಿದರು.
ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರವನ್ನು ಡಿಸೆಂಬರ್ ತಿಂಗಳಲ್ಲಿ ನಡೆಯುವ ಉಪ ವಲಯ ಅರಣ್ಯ ಅಧಿಕಾರಿಗಳ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು.







