ಮಂಡೆಕೋಲು ಗ್ರಾ.ಪಂ. ಮಾಜಿ ಸದಸ್ಯ ಸುಂದರ ಗೌಡ ಮೀನಗದ್ದೆ ನಿಧನ

0

ಮಂಡೆಕೋಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಂದರ ಗೌಡ ಮೀನಗದ್ದೆಯವರು ಅಸೌಖ್ಯದಿಂದ ಸೆ.7ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು.

ಕೃಷಿಕರಾಗಿದ್ದ ಸುಂದರ ಗೌಡರು ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಮಂಡೆಕೋಲು ಸಹಕಾರ ಸಂಘದ ನಿರ್ದೇಶಕರಾಗಿ, ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಮಂಡೆಕೋಲು ಕಳೇರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಶೀಲಾ, ಪುತ್ರ ವಿಕಾಸ್ ಮೀನಗದ್ದೆ, ಪುತ್ರಿಯರಾದ ಶ್ರೀಮತಿ ವಿನುತಾ ಪಾತಿಕಲ್ಲು, ಶ್ರೀಮತಿ ವಿಜೇತ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.