













ಬೆಳ್ಳಾರೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅ. 11ರಿಂದ ಅ. 20ರ ತನಕ ವಿಜೃಂಭಣೆಯಿಂದ ಜರಗಲಿದೆ.
ಅ. 11ರಂದು ಬೆಳಿಗ್ಗೆ ಗಂಟೆ 8-00ಕ್ಕೆ ದೀಪೋಜ್ವಲನ ನಡೆಯಲಿದೆ. ನವರಾತ್ರಿಯ ಪ್ರತಿದಿನ ಮಧ್ಯಾಹ್ನ ಗಂಟೆ 12-00ರಿಂದ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 8-00ಕ್ಕೆ ಉಭಯ ದೇವರಿಗೆ ಮಹಾಪೂಜೆ,
ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಲಕ್ಷ್ಮೀನಾರಾಯಣ ಶ್ಯಾನುಭಾಗ್ ತಿಳಿಸಿದ್ದಾರೆ.







