ಚೊಕ್ಕಾಡಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

0

ಮಯೂರಿ ಯುವತಿ ಮಂಡಲ, ಚೊಕ್ಕಾಡಿ ವತಿಯಿಂದ ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿಯ ಅಂಗನವಾಡಿ ಕೇಂದ್ರ, ಪ್ರಯಾಣಿಕರ ತಂಗುದಾಣ ಹಾಗೂ ಅಜ್ಜನಗದ್ದೆ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಮಯೂರಿ ಯುವತಿ ಮಂಡಲದ ಸದಸ್ಯರು ಹಾಗೂ ಅಜ್ಜನಗದ್ದೆ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತೆಯ ಮಹತ್ವ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಕುರಿತು ಅರಿವು ಮೂಡಿಸಲಾಯಿತು. “ಸ್ವಚ್ಛ ಪರಿಸರ – ಆರೋಗ್ಯಕರ ಸಮಾಜ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಮಯೂರಿ ಯುವತಿ ಮಂಡಲದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಅಜ್ಜನಗದ್ದೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.