ದಾಖಲೆ ನಿರ್ಮಿಸಿ ಚಿನ್ನ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಭಾನವಿ ಪಿ.ಎಸ್.














ತುಮಕೂರಿನ ಮಹಾತ್ಮಗಾಂಧಿ ಸ್ಟೇಡಿಯಂ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅತ್ಲೆಟಿಕ್ ಮೀಟ್ – 2026 ರ 18ರ ವಯೋಮಾನದ 400ಮೀ ಓಟದಲ್ಲಿ ಭಾನವಿ ಪಿ.ಎಸ್. 55 .00 ಸೆಕೆಂಡ್ ನಲ್ಲಿ ಕ್ರಮಿಸಿ ದಾಖಲೆ ನಿರ್ಮಿಸಿ,ಚಿನ್ನ ಗೆದ್ದು, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ 4×400 ರಿಲೇ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಹಾಸನದಲ್ಲಿ ನಡೆದ 4×400 ರಿಲೇ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಅ.6 ರಂದು ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರು ಇಲ್ಲಿ ನಡೆದ ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ 2026 ರಲ್ಲಿ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ..400 ಮೀಟರ್ ಓಟವನ್ನು 55.00 ಸೆಕೆಂಡಿನಲ್ಲಿ ಕ್ರಮಿಸಿ ಹೊಸ ದಾಖಲೆ ನಿರ್ಮಿಸಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಭಾನವಿ ಅಮರ ಮುಡ್ನೂರು ಗ್ರಾಮದ ಕುಕ್ಕುಜಡ್ಕ ಸುರೇಶ್ ಚಾಮಡ್ಕ ಮತ್ತು ಅನಿತಾ ದಂಪತಿಯ ಪುತ್ರಿ.







