ಅ.09 : ಐವರ್ನಾಡು : ಕಸ್ತೂರಿರಂಗನ್ ವರದಿ ವಿರುದ್ಧ ಐವರ್ನಾಡು ಗ್ರಾಮಸ್ಥರ ಸಭೆ

0

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಇದರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಐವರ್ನಾಡು ಗ್ರಾಮಸ್ಥರ ಸಭೆಯು ಅ.09 ರಂದು ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 10.00 ಕ್ಕೆ ಸಭೆ ನಡೆಯಲಿದ್ದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಭಾಗವಹಿಸಲಿದ್ದಾರೆ.
ಗ್ರಾಮಸ್ಥರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ,ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥರವರು ತಿಳಿಸಿದ್ದಾರೆ.