













ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತು ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ
ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ,
ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವು ಅ.8 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ.ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಳ್ಯ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಯವರು ಪ್ರಾಸ್ತಾವಿಕ ಮಾತನಾಡಿ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಬೆಳ್ಳಾರೆ ಪ್ರಾಥಮಿಕ. ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಮಮತ ರೈ,ಪೋಷಣ್ ಸಂಯೋಜಕಿ ಪ್ರಮೀಳಾ,ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ.ಎಂ,ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ,ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಅಧ್ಯಕ್ಷೆ ಶ್ರೀಮತಿ ದೇವಕಿ ಮುರ್ಕೆತ್ತಿ ಉಪಸ್ಥಿತರಿದ್ದರು.
ಶ್ರೀಮತಿ ಪೂರ್ಣಿಮಾ ಪೆರುವಾಜೆ ಪ್ರಾರ್ಥಿಸಿ,ಶ್ರೀಮತಿ ಪ್ರತಿಮಾ ಸ್ವಾಗತಿಸಿ, ನಿಶ್ಚಿತಾ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಬಗೆಯ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ನಡೆಯಿತು.







