ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ವಿಶ್ವ ಅಂಚೆ ದಿನಾಚರಣೆ – ಸನ್ಮಾನ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ವಿಶ್ವ ಅಂಚೆ ದಿನಾಚರಣೆಯನ್ನು ಅ.10 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಂಚೆ ಇಲಾಖೆಯ ಸಿಬ್ಬಂದಿ ಬಾಲಕೃಷ್ಣ ಅವರನ್ನು ಶಾಲು ಹೊದಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷರಾದ ರೋಟರಿಯನ್ ಆರಿಫ್ ಬೆಳ್ಳಾರೆ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಚೆ ಕಚೇರಿಯ ಅಧಿಕಾರಿ ಶ್ರೀಮತಿ ಯಶೋದಾ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.