













ಸ್ನೇಹಿತರ ಬಳಗ ಕಲ್ಪಡ ಕೊಡಿಯಾಲ ಇದರ ದಶಮಾನೋತ್ಸವ ಕಾರ್ಯಕ್ರಮವು ನ. 14 ಮತ್ತು 15 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.11 ರಂದು ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡದಲ್ಲಿ ನಡೆಯಿತು.
ಶ್ರೀ ಉಳ್ಳಾಕುಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವರಾಮ ಉಪಾಧ್ಯಾಯ ಕಲ್ಪಡ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ನೇಹಿತರ ಬಳಗದ ಅಧ್ಯಕ್ಷರಾದ ಸುರೇಶ್ ಗುತ್ತು, ಶ್ರೀ ಕ್ಷೇತ್ರ ಭಜನಾ ಪರಿಷತ್ ಬೆಳ್ಳಾರೆ ವಲಯದ ಕೋಶಾಧಿಕಾರಿಯಾದ ಪೂರ್ಣಿಮಾ ಉಪಾಧ್ಯಾಯ, ದೈವ ಪಾತ್ರಿಕರು, ಊರಿನ ಗಣ್ಯರು, ಬಳಗದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.







