ಬೆಳ್ಳಾರೆ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದಿಂದ ಮಾನಸಿಕ ಆರೋಗ್ಯ ಕುರಿತು ಕಾರ್ಯಾಗಾರ

0

ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಸ್ನಾತಕ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆಯ ಸಹಯೋಗಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮನೋವೈದ್ಯಶಾಸ್ತ್ರ ವಿಭಾಗದ ಮನೋವೈದ್ಯಕೀಯ ಸಮಾಜ ಕಾರ್ಯಕರ್ತರಾದ ಭರತ್ ಭೂಷಣ್ ಮತ್ತು ಗಣೇಶ್ ಲಕ್ಷ್ಮಣ್ ರವರು ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಮಾನಸಿಕ ಆರೋಗ್ಯದ ವಿವಿಧ ಆಯಾಮಗಳು ಹಾಗೂ ಮಾನಸಿಕ ಅನಾರೋಗ್ಯದ ವಿವಿಧ ಕಾರಣಗಳು, ಪರಿಣಾಮಗಳು ಮತ್ತು ತಡೆಗಟ್ಟುವ ಮಾರ್ಗಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ಮಾತನಾಡಿ ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯ ಮತ್ತು ಕೌಟುಂಬಿಕ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಐ.ಕ್ಯೂ.ಎ.ಸಿ. ಸಂಚಾಲಕರು ಹಾಗೂ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಗಿರೀಶ್ ಸಿ. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಸ್ಥ ಮನಸ್ಸಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.


ವಿದ್ಯಾರ್ಥಿ ಜಯಂತ್ ಆಶಯ ಗೀತೆ ಹಾಡಿದರು. ಶಮಿತ್ ಸ್ವಾಗತಿಸಿ, ಕು.ಲಾವಣ್ಯ ವಂದಿಸಿದರು. ಭುವನ್ ಮತ್ತು ಕು. ಭವ್ಯ ಸಂಪನ್ಮೂಲ ವ್ಯಕ್ತಿಗಳ ವ್ಯಕ್ತಿ ಪರಿಚಯ ಮಾಡಿದರು. ಕು. ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷರಾದ ದುರ್ಗಾ ಪ್ರಸಾದ್ ಮತ್ತು ಕಾರ್ಯದರ್ಶಿ ಕು. ಹರ್ಷಿತಾ ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಸ್ನಾತಕ ಮತ್ತು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಕ್ರಿಯವಾಗಿ ಭಾಗವಹಿಸಿ ಕಾರ್ಯ್ರಮವನ್ನು ಯಶಸ್ವಿಗೊಳಿಸಿದರು.

ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕಾಂತರಾಜು ಸಿ, ಉಪನ್ಯಾಸಕರಾದ ಶ್ರೀಮತಿ ಗೀತಾ ವಸಂತ್, ಈಶ್ವರ ಹೆಗ್ಡೆ, ಶ್ರೀಮತಿ ಕಾವ್ಯ, ಶ್ರೀಮತಿ ಉಷಾ ಮತ್ತು ಮಂಜುನಾಥ್ ಉಪಸ್ಥಿತರಿದ್ದರು.