ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಪ್ರಧಾನವಾದ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು 2027 ರ ಜನವರಿ ತಿಂಗಳ ಮೊದಲ ವಾರದಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ವಿವಿಧ ಸಮಿತಿಗಳ ರಚನೆಯು ಅ.14 ರಂದು ದೇವಾಲಯದ ವಠಾರದಲ್ಲಿ ನಡೆಯಿತು.














ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪಂಚಸ್ಥಾಪನೆಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥ ಕಾಯರ, ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಮಿನುಂಗೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜನಾರ್ದನ ದೋಳ, ಭಜನಾ ಮಂಡಳಿ ಅಧ್ಯಕ್ಷ ವಾಸುದೇವ ಆಚಾರ್ಯ ಉಪಸ್ಥಿತರಿದ್ದರು.
ಸಭೆಯಲ್ಲಿ ನಿಕಟಪೂರ್ವ ವ್ಯವಸ್ಥಾಪನ ಸಮಿತಿ ಅಧ್ಯಕ್ಷರುಗಳು, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರು ವ್ಯವಸ್ಥಾಪನ ಸಮಿತಿಯ ಹಾಲಿ ಸದಸ್ಯರು, ದೇವಾಲಯದ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಉಭಯ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.







