ನಾಳೆ (ಅ.18) ಕೊಯಿಕುಳಿ ಶ್ರೀಕೃಷ್ಣ ಮಂದಿರದಲ್ಲಿ ಶ್ರೀ ದುರ್ಗಾಪೂಜೆ

0

ದುಗ್ಗಲಡ್ಕದ ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ಶ್ರೀಕೃಷ್ಣ ಸೇವಾ ಸಮಿತಿ ವತಿಯಿಂದ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಪೂಜೆ ಅ.18 ರಂದು ನಡೆಯಲಿದೆ. ವೆ.ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾ ಸಪ್ತಶತಿ ಪಾರಾಯಣ ಸಹಿತ ದುರ್ಗಾಪೂಜೆ ನಡೆಯಲಿದೆ. ಬೆಳಿಗ್ಗೆ 8 ರಿಂದ ಭಜನೆ, 9.30ರಿಂದ ದುರ್ಗಾಪೂಜೆ ಆರಂಭಗೊಂಡು 12.30ಕ್ಕೆ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.