ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಂಭ್ರಮದ ಆಯುಧ ಪೂಜೆ

0

ಸುಳ್ಯ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಆಚರಿಸಲಾಯಿತು.

ದಸರಾ ಹಬ್ಬದ ಮಹತ್ವದ ಅಂಗವಾಗಿ ಆಚರಿಸಲಾಗುವ ಆಯುಧ ಪೂಜೆಯ ಸಂದರ್ಭದಲ್ಲಿ ವಿದ್ಯೆ, ಜ್ಞಾನ ಹಾಗೂ ದೈನಂದಿನ ಕಾರ್ಯಗಳಿಗೆ ನೆರವಾಗುವ ಉಪಕರಣಗಳಿಗೆ ಪೂಜೆ ಸಲ್ಲಿಸಿ ಕೃತಜ್ಞತೆ ಸಮರ್ಪಿಸಲಾಯಿತು. ಕಾಲೇಜಿನ ಆವರಣದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಪ್ರದಾಯಿಕ ಆಚರಣೆಯ ಮೂಲಕ ಶುಭ ಹಾರೈಸಲಾಯಿತು.

ವಿದ್ಯೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ಇಂತಹ ಆಚರಣೆಗಳು ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಬಗ್ಗೆ ಗೌರವ ಮತ್ತು ಅಭಿಮಾನವನ್ನು ಬೆಳೆಸಲು ಸಹಕಾರಿಯಾಗಿವೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ. ಆರ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.