













ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕೊಡಿಯಾಲ ಇದರ ಆಶ್ರಯದಲ್ಲಿ 26 ನೇ ವರ್ಷದ ಶ್ರೀ ಶಾರದೋತ್ಸವ ಅ. 20ರಂದು ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠಾಪನೆ ಬಳಿಕ ಕುಣಿತ ಭಜನೆ, ಮಧ್ಯಾಹ್ನ ಮಹಾಪೂಜೆ, ಅಕ್ಷರಾಭ್ಯಾಸ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00 ರಿಂದ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ಗಂಟೆ 5.00ರಿಂದ ಭಜನಾ ಕಾರ್ಯಕ್ರಮ, 7.00ರಿಂದ ಶಿವದೂತ ಗುಳಿಗ ನಾಟಕ ಬಳಿಕ ಮಹಾಪೂಜೆ, ಶೋಭಾಯತ್ರೆ ನಡೆಯಲಿದೆ.







