ಸುಳ್ಯ ಮರಾಟಿ ಸಮಾಜ ಸೇವಾ ಸಂಘದಿಂದ ನಡೆಯುವ ಸತ್ಯನಾರಾಯಣ ಪೂಜೆಯ ಆಮಂತ್ರಣ ಬಿಡುಗಡೆ

0

ಸುಳ್ಯ ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ಮತ್ತು ಯುವ ವೇದಿಕೆ ಹಾಗೂ ಮರಾಟಿ ಧಾರ್ಮಿಕ ಚಿಂತನಾ ಸಮಿತಿಯ ಆಶ್ರಯದಲ್ಲಿ ನ.29 ರಂದು ಸಮಾಜದ ಶ್ರೇಯೋಭಿವೃದ್ಧಿಗಾಗಿ ನಡೆಯುವ ಗಣಪತಿ ಹವನ ಮತ್ತು ಸತ್ಯನಾರಾಯಣ ದೇವರ ಪೂಜೆ ಆಮಂತ್ರಣವನ್ನು ಅ.18 ರಂದು ಬಿಡುಗಡೆ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷ ಜಿ.ಬುದ್ಧ ನಾಯ್ಕ್, ಉಪಾಧ್ಯಕ್ಷೆ ಶ್ರೀಮತಿ ಸುಲೋಚನ ನಾರಾಯಣ, ಪ್ರ.ಕಾರ್ಯದರ್ಶಿ ರಮೇಶ್ ನೀರಬಿದಿರೆ, ಕೋಶಾಧಿಕಾರಿ ಐತ್ತಪ್ಪ ಎನ್.,ಮಹಿಳಾ ವೇದಿಕೆಯ ಅಧ್ಯಕ್ಷೆ ರೇವತಿ ದೊಡ್ಡೇರಿ, ಯುವ ವೇದಿಕೆಯ ಅಧ್ಯಕ್ಷ ಅಶೋಕ್ ಕುಮಾರ್ ದೊಡ್ಡೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.