













ಕಲ್ಮಡ್ಕದ ಬೊಮ್ಮೆಟ್ಟಿ ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ
ಗಣೇಶ್ ಮತ್ತು ಭರತ್ ರವರ ಮನೆಗೆ ವಿಧಾನ ಪರಿಷತ್ ಶಾಸಕರು, ಸುಳ್ಯ ಕ್ಷೇತ್ರದ ಉಸ್ತುವಾರಿ, ಎ ಐ ಸಿ ಸಿ ಕಾರ್ಯದರ್ಶಿ ಪಿ ವಿ. ಮೋಹನ್ ಭೇಟಿ ನೀಡಿದರು
ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದ ಶಾಸಕರು ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ
ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು , ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹೇಶ್ ಕರಿಕ್ಕಳ, ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಮೊದಲಾದವರು ಉಪಸ್ಥಿತರಿದ್ದರು







