ವಿದ್ಯುತ್ ಆಘಾತದಿಂದ ಮೃತಪಟ್ಟ ಪ್ರಕರಣ

0

ಆರೋಪಿಗಳನ್ನು ಕೂಡಲೇ ಬಂಧಿಸಿ ನೊಂದ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಆಗ್ರಹ

ಕಲ್ಮಡ್ಕ ವಿದ್ಯುತ್ ಅಘಾತಕ್ಕೊಳಗಾಗಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಕೂಡಲೇ ಬಂಧಿಸಿ ಮೃತ ಭರತ್ ಹಾಗೂ ರಮೇಶ್ ರವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಯವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಸಂಬಂಧಪಟ್ಟ ಆರೋಪಿ ಎಲ್ಲೇ ಇದ್ದರೂ ಪೋಲಿಸ್ ಇಲಾಖೆ ಅವರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು ಮತ್ತು ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗುವಂತೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.