ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುಧ ಪೂಜೆ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುಧ ಪೂಜೆ ಅ.20 ರಂದು ಅರ್ಚಕ ನಾರಾಯಣ ಭಟ್ ರವರ ನೇತೃತ್ವದಲ್ಲಿ ನಡೆಯಿತು.

ಸಂಸ್ಥೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ.ಯವರ ನೇತೃತ್ವದಲ್ಲಿ ಪೂಜೆ ಆರಂಭಗೊಂಡು ಬಳಿಕ ಸಂಸ್ಥೆಯ ಎಲ್ಲಾ ವಿಭಾಗಗಳಿಗೂ, ವಾಹನಗಳಿಗೂ ಆಯುಧ ಪೂಜೆ ನಡೆಯಿತು.

ನಂತರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ ಸಿ, ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ ಸಿ ಮತ್ತು ಹೇಮನಾಥ್ ಕೆ ವಿ, ಕೋಶಾಧಿಕಾರಿಗಳಾದ ಡಾ. ಗೌತಮ್ ಗೌಡ ಹಾಗೂ ಕೌನ್ಸಿಲ್ ಮೆಂಬರ್ ಗಳ ಉಪಸ್ಥಿತಿಯಲ್ಲಿ ಮಹಾ ಮಂಗಳಾರತಿ ನಡೆಯಿತು.

ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಕಲಿಕಾ ವೈದ್ಯರುಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.