ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುಧ ಪೂಜೆ ಅ. 20ರಂದು ನಡೆಯಿತು.















ಎಒಎಲ್ಇ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ ಕೋಶಾಧಿಕಾರಿ ಡಾ. ಗೌತಮ್ ಗೌಡ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರು ಡಾ. ಲೀಲಾಧರ್ ಡಿ.ವಿ, ಎನ್ನೆಂಸಿ ಪ್ರಾಂಶುಪಾಲರು ಡಾ. ರುದ್ರಕುಮಾರ್ ಎಂ.ಎಂ, ಡಾ. ಗೀತಾ ದೊಪ್ಪ, ಡಾ. ರವಿಕಾಂತ್ ಜಿ.ಒ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ಬಳಸಲಾಗುವ ಯಂತ್ರೋಪಕರಣಗಳು ಹಾಗೂ ವಿವಿಧ ವಿಭಾಗಗಳಲ್ಲಿ ಬಳಸುವ ಸಾಧನಗಳನ್ನು ಪೂಜಿಸಿ, ಎಲ್ಲರ ಆರೋಗ್ಯ, ಸುಖ-ಸಮೃದ್ಧಿ ಮತ್ತು ಸಂಸ್ಥೆಯ ಅಭಿವೃದ್ಧಿಗಾಗಿ ಪ್ರಾರ್ಥಿಸಲಾಯಿತು.
ಹಾಗೂ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಪ್ರತ್ಯೇಕ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಪಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಸಂಭ್ರಮದಿಂದ ಪೂಜೆಯಲ್ಲಿ ಪಾಲ್ಗೊಂಡರು.








