ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು














ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳ್ಳಾರೆ ಠಾಣಾ ಪೊಲೀಸರು ಅಕ್ಟೋಬರ್ 20ರ ಸಂಜೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪಿಗಳು ಗುರವ, ಇಸೂಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂಬುವವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕುವತ್ತೋಡಿಯ ನಿರ್ಜನ ಪ್ರದೇಶದಲ್ಲಿ ಗುಂಪಾಗಿ ಕುಳಿತು ನಗದು ಹಣ ಪಣವಾಗಿಟ್ಟು ಇಸ್ಪೀಟ್ ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಈರಯ್ಯ ದೂಂತೂರು ರವರು ತಮ್ಮ ಸಿಬ್ಬಂದಿಗಳ ತಂಡದೊಂದಿಗೆ ಸ್ಥಳಕ್ಕೆ ಏಕಾಏಕಿ ದಾಳಿ ನಡೆಸಿ ಆರೋಪಿಗಳನ್ನು ಮತ್ತು ಇಸ್ಪೀಟ್ ಆಟಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.






