ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ಸ್ವೀಕಾರ

0

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪ್ರತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ.ಕೆ.ಎಮ್. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ, ಸಂಚಾಲಕ ಪ್ರಸನ್ನ ದರ್ಭೆ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರಮೇಶ್ಚಂದ್ರ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ.ವಿ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ರಕ್ಷಾ ಪ್ರಭು ವಿವಿಧ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.