ಸುಳ್ಯದ ರಂಗಮಯೂರಿ ಕಲಾ ಶಾಲೆಯಲ್ಲಿ ಶಾರದಾ ಪೂಜೆ

0

ವಿದ್ಯಾರ್ಥಿಗಳಿಂದ ಭಜನೆ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಕಾರ್ಯಕ್ರಮ

ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ರಂಗಮಯೂರಿ ಕಲಾ ಶಾಲೆಯಲ್ಲಿ ಶಾರದಾ ಪೂಜೆ ಅ.21ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹವನ, ಶಾರದಾ ಪೂಜೆ ನೆರವೇರಿತು. ಇದೇ ಸಂದರ್ಭ ಸಂಗೀತ ಗುರುಗಳಾದ ಮಹಾಬಲೇಶ್ವರ ಬಿರ್ಮುಕಜೆ ಮತ್ತು ಸುಮನ ರಾವ್ ಪುತ್ತೂರು ರವರಿಗೆ ಗುರುವಂದನ ಕಾರ್ಯಕ್ರಮವು ನಡೆಯಿತು.

ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭಜನೆ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ ಶಿವಾನಂದ, ಎಓಎಲ್ ಇ ಕಮಿಟಿ ಬಿ ಇದರ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ, ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ಅಧ್ಯಕ್ಷ ವಿನಯ್ ಬೆದ್ರುಪಣೆ, ಪ್ರಣವ ಸಹಕಾರಿ ಸಂಘದ ಸುಳ್ಯ ಶಾಖೆಯ ಶಾಖಾ ವ್ಯವಸ್ಥಾಪಕ ರಂಜಿತ್ ಅಡ್ತಲೆ ಸಹಿತ
ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ಸರ್ವರನ್ನು ಸ್ವಾಗತಿಸಿದರು. ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.