ಪಂಜದಲ್ಲಿ 2140 ನೇ ಮಧ್ಯವರ್ಜನ ಶಿಬಿರದ ಉದ್ಘಾಟನೆ

0

ಶಿಬಿರದ ಮೂಲಕ ನಿಮ್ಮನ್ನು ದೂಷಿಸಿದ ಸಮಾಜದಲ್ಲಿ ತಲೆ ಎತ್ತಿ ನಿಲ್ಲಿ – ಭಾಗೀರಥಿ ಮುರುಳ್ಯ

ಒಂದು ವಾರದ ಶಿಬಿರದಲ್ಲಿ ಎಲ್ಲವನ್ನೂ ಮರೆತು ಸ್ವ ಇಚ್ಚೆಯಿಂದ ಭಾಗವಹಿಸಿ. ಕುಡಿತದ ಚಟದಿಂದ ನೀವು ಏನನ್ನೆಲ್ಲಾ ಕಳೆದುಕೊಂಡಿದ್ದಿರೋ ಮುಂದೆ ಮಧ್ಯವರ್ಜನ ಶಿಬಿರದ ಮೂಲಕ ಮನ ಪರಿವರ್ತನರಗೊಂಡು, ಕುಡಿತವನ್ನು ಬಿಟ್ಟು, ಸ್ವಂತ ಮನೆ ಕಟ್ಟಿ, ಸಂಸಾರವನ್ನು ಚೆನ್ನಾಗಿ ನೋಡಿಕೊಳ್ಳಿ, ನಿಮ್ಮ ಕಡೆಗಣಿಸಿದ ಸಮಾಜದಲ್ಲಿ ತಲೆ ಎತ್ತಿ ನಿಲ್ಲಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಅವರು ಅ. 24ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 2140ನೇ ಮದ್ಯವ್ಯರ್ಜನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಗತಿಪರ ಕೃಷಿಕರಾದ ಶ್ರೇಯಾಂಶುಕುಮಾರ್ ಶೆಟ್ಟಿಮೂಲೆ ಶಿಬಿರವನ್ನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಭಾರತ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಎಂ.‌ವೆಂಕಪ್ಪ ಗೌಡ ಮಾತನಾಡುತ್ತಾ ಹಲವು ಮಂದಿ ಕುಡಿತದ ಚಟದಿಂದ ಹೊರಬಂದು ಜನಪ್ರತಿನಿಧಿಗಳಾಗಿದ್ದಾರೆ. ನವಜೀವನದ ಮೂಲಕ ಪಂಚಾಯತ್ ಅಧ್ಯಕ್ಷರಾಗಿರುವುದೂ ಇದೆ. ಇದು ಈ ಯೋಜನೆಯ ಮ‌ೂಲಕ ಸಾಧ್ಯವಾಯಿತು. ಇವತ್ತು ಇಲ್ಲಿಯೂ ಆ ರೀತಿಯ ಬದಲಾವಣೆಗಳು ಆಗಿ ನವಜೀವನ ನಡೆಸುವಂತಾಗಲಿ ಎಂದರು. ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು
ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ
ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಜರ ವ್ಯವಸ್ಥಾಪನಾ ಸಮಿತಿ ಪಂಜ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ದೇರಳಕಟ್ಟೆ (ಕ್ಷೇಮ), ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ, ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಊರಿನ ದಾನಿಗಳು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾತಿಲ, ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ವೈದ್ಯರಾದ ಡಾ. ರಾಮಯ್ಯ ಭಟ್ ಪಂಜ, ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಜಾಕೆ ಮಾಧವ ಗೌಡ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯ.ಸ. ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, 2140ನೇ ಮದ್ಯವ್ಯರ್ಜನ ಶಿಬಿರದ ವ್ಯ.ಸ. ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು, ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಭರತ್ ನೆಕ್ರಾಜೆ, ಪಂಜ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಲ್ಲೋಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಮಾಜಿ ಅಧ್ಯಕ್ಷರುಗಳಾದ ಪಿ.ಸಿ. ಜಯರಾಮ ಮತ್ತು ಶ್ರೀಮತಿ ವಿಮಲಾ ರಂಗಯ್ಯ, ಪಂಜ ವಲಯಾಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಕಾಶ್ ಆಚಾರ್ಯ ನರಿಯಂಗ ಪ್ರಾರ್ಥಿಸಿದರು. ಶಿಬಿರದ ವ್ಯ.ಸ. ಕಾರ್ಯದರ್ಶಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ, ಬಳ್ಪ ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೊಳ್ಮಲೆ ವಂದಿಸಿದರು. ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಂಜ ವಲಯದ ಮೇಲ್ವಿಚಾರಕಿ ಮತ್ತು ಶಿಬಿರದ ಜೊತೆ ಕಾರ್ಯದರ್ಶಿ ಶ್ರೀಮತಿ ಮಮತಾ ಎನ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಶಿಬಿರದ ಪ್ರಾಯೋಜಕರು ಮತ್ತು ಶಿಬಿರಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.