ಗೂನಡ್ಕ : ಕಾರು ಮತ್ತು ಲಾರಿ ಅಪಘಾತ -ಓರ್ವ ಬಾಲಕ ಮೃತ್ಯು

0

ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಗೂನಡ್ಕ ಶಾಲೆಯ ತಿರುವು ಬಳಿ ಲಾರಿ ಮತ್ತು ಕಾರು ಪರಸ್ಪರ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಸುಮಾರು 13 ವರ್ಷದ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ಮೂರಕ್ಕೂ ಹೆಚ್ಚು ಮಂದಿ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ.

ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ಪರಸ್ಪರ ಡಿಕ್ಕಿ ಆಗಿ ಕಾರಿನಲ್ಲಿದ್ದ ಓರ್ವ ಬಾಲಕ ಮೃತಪಟ್ಟಿದ್ದು ಮತ್ತಿಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸುಳ್ಯದ ಆಂಬುಲೆನ್ಸ್ ವಾಹನಗಳ ಮೂಲಕ ಕೆವಿಜಿ ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಕಾರಿನಲ್ಲಿದ್ದವರು ಮೂಲತಃ ಬಂಟ್ವಾಳ ತಾಲೂಕಿನವರಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.