














ಮಂಗಳೂರಿನ ಡಾ. ಪಿ. ದಯಾನಂದ ಪೈ , ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 22 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿನ ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಾದ ತಿಲಕೇಶ್ ಕೆ. ಆರ್., ವಿಕೇತ್ ಕೆ. ಬಿ., ಮನೀಶ್ ರೈ ಬಿ., ಯಶ್ಮಿತ ಎಮ್., ಹಾಗೂ ಅಂತಿಮ ಬಿಕಾಂ ವಿದ್ಯಾರ್ಥಿನಿ ಸಿಂಚನ ಪಿ. ಇವರನ್ನೊಳಗೊಂಡ ತಂಡವು ಸಮಗ್ರ ತೃತೀಯ ಸ್ಥಾನವನ್ನು ಪಡೆದಿರುತ್ತದೆ.







