ಸುಳ್ಯದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮಣ್ಣು ಮತ್ತು ನೀರಿನ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಾಗೃತಿ ಕರಪತ್ರ ಬಿಡುಗಡೆ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಸುಳ್ಯದ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ “ಮಣ್ಣು ಮತ್ತು ನೀರಿನ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ” ಎಂಬ ಜಾಗೃತಿ ಕರಪತ್ರವನ್ನು ಅ.24 ರಂದು ಬಿಡುಗಡೆ ಮಾಡಲಾಯಿತು.
ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ನೀರಿನ ಅಭಾವ ಹಾಗೂ ಮಣ್ಣಿನ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕರಪತ್ರವನ್ನು ಸಿದ್ಧಪಡಿಸಲಾಗಿತ್ತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷರಾದ ರೋಟರಿಯನ್ ಆರಿಫ್ ಬೆಳ್ಳಾರೆ ಅವರ ಉಪಸ್ಥಿತಿಯಲ್ಲಿ, ರೋಟರಿ ಜಿಲ್ಲಾ ಗವರ್ನರ್ ರೋಟರಿಯನ್ ಸತೀಶ್ ಬೋಳಾರ್ ಅವರು ಕರಪತ್ರವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಜಿಲ್ಲಾ ಗವರ್ನರ್ ರೋಟರಿಯನ್ ಆನಂದ್ ಕಂಡಿಗ, ರೊ. ರವೀಂದ್ರಗೌಡ, ರೊ. ಚಂದ್ರಶೇಖರ್ ರೈ, ರೊ. ವಿನಯಕುಮಾರ್, ರೊ. ಪದ್ಮನಾಭ ಬೀಡು, ರೊ.ಹನೀಫ್, ರೊ. ಪ್ರಶಾಂತ್, ರೊ.ರೋಹಿತ್ ಅಕ್ಷ್ವಾ, ರೊ. ಬಾಲಕೃಷ್ಣ ಮಡ್ತಿಲ, ಹಾಗೂ ಸುಳ್ಯ ಸಿಟಿ ರೋಟರಿ ಕ್ಲಬ್ ಮತ್ತು ಸುಳ್ಯ ರೋಟರಿ ಕ್ಲಬ್‌ನ ಸದಸ್ಯರು ಸೇರಿದಂತೆ ಹಲವು ಗಣ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಮಣ್ಣು ಮತ್ತು ನೀರು ಪ್ರಕೃತಿಯ ಅಮೂಲ್ಯ ಸಂಪತ್ತು. ಅವುಗಳ ಸಂರಕ್ಷಣೆ ಕೇವಲ ಒಬ್ಬರ ಜವಾಬ್ದಾರಿಯಲ್ಲ, ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ನಡೆದ ಈ ಜಾಗೃತಿ ಕಾರ್ಯಕ್ರಮವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.