ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ಪರಿಹಾರ ನಿಧಿ ಚೆಕ್ ವಿತರಣೆ

0

ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಸದಸ್ಯರಾದ ಯಶೋದ ಕೆ ಎಸ್ ಇವರ ಮನೆಗೆ ಹಾನಿಯಾದ ಹಿನ್ನೆಲೆಯಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪರಿಹಾರವಾಗಿ ರೂ 10,000/-ಗಳ ಚೆಕ್ ಅನ್ನು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ ಹಾಗೂ ಸಂಸ್ಥೆಯ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಉಪಸ್ಥಿತರಿದ್ದರು.