ಸುಳ್ಯ ತಾ.ಪಂ. ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ.26 ರಂದು ಸುಳ್ಯ ತಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಡಮಂಗಲ ಸರಕಾರಿ ಪ್ರೌಢಶಾಲಾ ಶಿಕ್ಷಕ ಡಾ.ಸಂತೋಷ್ ಎಸ್.ಪಿ. ವಾಲ್ಮೀಕಿ ಮಹರ್ಷಿಗಳ ಬಗೆಗೆ ವಿಶೇಷ ಉಪನ್ಯಾಸ ನೀಡಿದರು.
ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ್, ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ., ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಮರಾಟಿ ಸಂಘದ ಪರವಾಗಿ ಭವಾನಿಶಂಕರ ಕಲ್ಮಡ್ಕ, ಉಪತಹಶೀಲ್ದಾರ್ ಅವಿನ್ ರಂಗತ್ತಮಲೆ , ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಉಪಸ್ಥಿತರಿದ್ದರು.

2025-26 ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನ 95 ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು.

ಹಾಸ್ಟೆಲ್ ವಿದ್ಯಾರ್ಥಿಗಳು ಸ್ವಾಗತ ಗೀತೆ ಹಾಡಿದರು. ಸುಳ್ಯದ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣರವರು ಸ್ವಾಗತಿಸಿದರು. ಮೇಲ್ವಿಚಾರಕಿ ಶ್ರೀಮತಿ ಕಾವ್ಯ ವಂದಿಸಿದರು. ಶ್ರೀಮತಿ ನಂದಿನಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.